alex Certify BIG BREAKING: ಬೆಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರಿಗೆ ಒಮಿಕ್ರಾನ್ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಬೆಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರಿಗೆ ಒಮಿಕ್ರಾನ್ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ಅಟ್ಟಹಾಸ ಹೆಚ್ಚುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರಲ್ಲಿ ಒಮಿಕ್ರಾನ್ ಸೋಂಕು ದೃಢಪಟ್ಟಿದೆ.

ಯುಕೆಯಿಂದ ಬೆಂಗಳೂರಿಗೆ ಆಗಮಿಸಿದ್ದ 26 ವರ್ಷದ ಮಹಿಳೆಯಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ. ಅಲ್ಲದೇ ಮಹಿಳೆಯ ತಂದೆ-ತಾಯಿ ಹಾಗೂ ತಂಗಿಯಲ್ಲಿಯೂ ಸೋಂಕು ದೃಢಪಟ್ಟಿದೆ.

ಸೋಂಕಿತರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮುಂಜಾಗೃತಾ ಕ್ರಮವಾಗಿ ಸೋಂಕಿತರಿದ್ದ ಫ್ಲ್ಯಾಟ್ ನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ಬಿಬಿಎಂಪಿ ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಂದು ಬೆಳಿಗ್ಗೆ ಮೈಸೂರಿನಲ್ಲಿ ವಿದೇಶದಿಂದ ಆಗಮಿಸಿದ್ದ 9 ವರ್ಷದ ಬಾಲಕಿಯಲ್ಲಿ ಒಮಿಕ್ರಾನ್ ಸೋಂಕು ದೃಢಪಟ್ಟಿತ್ತು. ಇದರ ಬೆನ್ನಲ್ಲೇ ಇದೀಗ ಬೆಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರಲ್ಲಿ ರೂಪಾಂತರಿ ವೈರಸ್ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...