ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ನಡುವೆ ರೂಪಾಂತರಿ ವೈರಸ್ ಒಮಿಕ್ರಾನ್ ಸ್ಫೋಟಗೊಂಡಿದೆ. ಇಂದು ಒಂದೇ ದಿನ ಬೆಂಗಳೂರಿನಲ್ಲಿ 287 ಜನರಲ್ಲಿ ಒಮಿಕ್ರಾನ್ ಪತ್ತೆಯಾಗಿದೆ.
ಆರೋಗ್ಯ ಸಚಿವ ಡಾ.ಸುಧಾಕರ್ ಈ ಕುರಿತು ಮಾಹಿತಿ ನೀಡಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 287 ಜನರಲ್ಲಿ ಒಮಿಕ್ರಾನ್ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
ಈ ಮೂಲಕ ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 766ಕ್ಕೆ ಏರಿಕೆಯಾಗಿದೆ.