ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, 80 ಅಪಾರ್ಟ್ ಮೆಂಟ್ ಗಳನ್ನು ಸೀಲ್ ಡೌನ್ ಮಾಡಲಾಗಿದೆ.
ಸಿಲಿಕಾನ್ ಸಿಟಿಯಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿದೆ. ಬೆಂಗಳೂರು ಮಹಾನಗರ ಪಾಲಿಕೆಯ ಮೂರು ವಲಯಗಳಾಗಿರುವ ಮಹಾದೇವಪುರ, ಯಲಹಂಕ ಹಾಗೂ ಬೊಮ್ಮನಹಳ್ಳಿ ವಲಯಗಳಲ್ಲಿ ಅತಿ ಹೆಚ್ಚು ಸೋಂಕಿತರ ಸಂಖ್ಯೆ ಕಂಡು ಬಂದಿದ್ದು, 80 ಅಪಾರ್ಟ್ ಮೆಂಟ್ ಗಳನ್ನು ಹಾಗೂ 70 ಮನೆಗಳನ್ನು ಬಿಬಿಎಂಪಿ ಅಧಿಕಾರಿಗಳು ಸೀಲ್ ಡೌನ್ ಮಾಡಿದ್ದಾರೆ.
ಜಮೀರ್ ಮನೆ ಮೇಲೆ ED ದಾಳಿ ಹಿಂದೆ ಡಿ.ಕೆ.ಶಿ. ಕೈವಾಡ; ಸಚಿವ ಎಸ್.ಟಿ. ಸೋಮಶೇಖರ್ ಟಾಂಗ್
168 ಕಂಟೇನ್ಮೆಂಟ್ ಝೋನ್ ಪ್ರದೇಶ ಎಂದು ಗುರುತಿಸಲಾಗಿದೆ. ರಾಜಧಾನಿಯಲ್ಲಿ ಅಪಾರ್ಟ್ ಮೆಂಟ್ ನಿವಾಸಿಗಳಲ್ಲೇ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಮತ್ತೆ ಟಫ್ ರೂಲ್ಸ್ ಜಾರಿ ಆತಂಕ ಎದುರಾಗಿದೆ.