alex Certify BIG BREAKING: ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸೋ ಮತ್ತೊಂದು ಮರ್ಡರ್; ಹಾಡಹಗಲೇ ರಸ್ತೆಯಲ್ಲಿ ವ್ಯಕ್ತಿಯ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸೋ ಮತ್ತೊಂದು ಮರ್ಡರ್; ಹಾಡಹಗಲೇ ರಸ್ತೆಯಲ್ಲಿ ವ್ಯಕ್ತಿಯ ಬರ್ಬರ ಹತ್ಯೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ವ್ಯಕ್ತಿಯೋರ್ವರನ್ನು ದುಷ್ಕರ್ಮಿಗಳು ನಡು ರಸ್ತೆಯಲ್ಲಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಆಲನಹಳ್ಳಿ ಬಳಿಯ ಮಾರ್ಗೊಂಡನಹಳ್ಳಿಯಲ್ಲಿ ನಡೆದಿದೆ.

ಕುಳ್ಳ ವೆಂಕಟೇಶ್ ಕೊಲೆಯಾದ ದುರ್ದೈವಿ. ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದ ಕುಳ್ಳ ವೆಂಕಟೇಶ್ ನನ್ನು ಆಟೋದಲ್ಲಿ ಬಂದ ಐದು ಜನ ದುಷ್ಕರ್ಮಿಗಳ ಗುಂಪು, ಆಟೋ ಡಿಕ್ಕಿ ಹೊಡೆದು ಬೀಳಿಸಿದ್ದಾರೆ. ಬೈಕ್ ನಿಂದ ವೆಂಕಟೇಶ್ ಕೆಳಗೆ ಬೀಳುತ್ತಿದ್ದಂತೆ ಲಾಂಗು, ಮಚ್ಚಿನಿಂದ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

BIG NEWS: ಕುಡಿದ ಅಮಲಿನಲ್ಲಿ ಮರವೇರಿ ಹುಚ್ಚಾಟ; ಸ್ನೇಹಿತರೊಂದಿಗೆ ನೀರಿಗಿಳಿದು ಮೋಜು-ಮಸ್ತಿ; ಡ್ಯಾಂ ಹಿನ್ನೀರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಟೆಕ್ಕಿ

ಜಮೀನು ವಿಚಾರವಾಗಿ ಕುಳ್ಳ ವೆಂಕಟೇಶ್ ನ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಆವಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...