ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾಲು ಸಾಲು ದುರಂತಗಳು ಸಂಭವಿಸುತ್ತಿದ್ದು, ಮೊನ್ನೆಯಷ್ಟೇ ಅಪಾರ್ಟ್ ಮೆಂಟ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸಜೀವ ದಹನಗೊಂಡ ಘಟನೆ ಮಾಸುವ ಮುನ್ನವೇ ಇದೀಗ ಅಂಥದ್ದೇ ಮತ್ತೊದು ಅವಘಡ ಸಂಭವಿಸಿದೆ.
ಬೆಂಗಳೂರಿನ ನಗರ್ತಪೇಟೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
SHOCKING NEWS: ಬೆಂಗಳೂರಿಗರನ್ನೇ ಬೆಚ್ಚಿ ಬೀಳಿಸುತ್ತೆ ಟೆಕ್ಕಿಗಳಿಂದಲೇ ಟೆಕ್ಕಿಯ ಕಿಡ್ನಾಪ್ ಕಹಾನಿ….!
ಚಾಮರಾಜಪೇಟೆಯ ರಾಯನ್ ಸರ್ಕಲ್ ಬಳಿಯ ಮನೆಯೊಂದರಲ್ಲಿ ಈ ದುರಂತ ಸಂಭವಿಸಿದೆ ಎನ್ನಲಾಗಿದ್ದು, ಸಿಲಿಂಡರ್ ಸ್ಫೋಟದ ರಭಸಕ್ಕೆ ಮೂವರ ದೇಹ ಛಿದ್ರ ಛಿದ್ರಗೊಂಡಿದೆ.