ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದೆ. ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ ಹಾಗೂ ಮಗಳು ಸಾವನ್ನಪ್ಪಿರುವ ಘಟನೆ ಚಿಕ್ಕಬಾಣಾವರದಲ್ಲಿ ನಡೆದಿದೆ.
ಬೆಂಗಳೂರಿನ ಉತ್ತರ ತಾಲೂಕಿನ ಚಿಕ್ಕಬಾಣಾವರದ ಮನೆಯೊಂದರಲ್ಲಿ ಈ ದುರಂತ ಸಂಭವಿಸಿದ್ದು, ಗ್ಯಾಸ್ ಗೀಸರ್ ನಿಂದ ಅನಿಲ ಸೋರಿಕೆಯಾಗಿ ಉಸಿರುಗಟ್ಟಿ ಅಮ್ಮ-ಮಗಳು ಸಾವನ್ನಪ್ಪಿದ್ದಾರೆ.
ಮಂಗಳಾ (35) ಹಾಗೂ ಗೌತಮಿ (7) ಮೃತರು. ಪತಿ ನರಸಿಂಹಮೂರ್ತಿ ಕೆಲಸಕ್ಕೆ ಹೋಗಿದ್ದ ವೇಳೆ ಈ ದುರಂತ ಸಂಭವಿಸಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.