ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ನಾಗವಾರದಲ್ಲಿರುವ ಫರ್ನಿಚರ್ ಗೋದಾಮಿಗೆ ಬೆಂಕಿ ತಗುಲಿದ್ದು, ಲಕ್ಷಾಂತರ ರೂ. ಮೌಲ್ಯದ ಪೀಠೋಪಕರಣಗಳು ಸುಟ್ಟು ಕರಕಲಾಗಿವೆ.
ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಅಗ್ನಿ ಅವಘಡದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಗೋದಾಮಿಗೆ ಬೆಂಕಿ ತಗುಲಲು ಕಾರಣವೇನೆಂಬುದು ತಿಳಿದುಬಂದಿಲ್ಲ.