alex Certify BIG BREAKING: ಬೆಂಗಳೂರಿನ ಯಲಹಂಕ ವಾಯುನೆಲೆಗೆ ಬಂದಿಳಿದ ಪ್ರಧಾನಿ ಮೋದಿ; ಆತ್ಮೀಯವಾಗಿ ಬರಮಾಡಿಕೊಂಡ ರಾಜ್ಯಪಾಲ ಗೆಹ್ಲೋಟ್, ಸಿಎಂ ಬೊಮ್ಮಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಬೆಂಗಳೂರಿನ ಯಲಹಂಕ ವಾಯುನೆಲೆಗೆ ಬಂದಿಳಿದ ಪ್ರಧಾನಿ ಮೋದಿ; ಆತ್ಮೀಯವಾಗಿ ಬರಮಾಡಿಕೊಂಡ ರಾಜ್ಯಪಾಲ ಗೆಹ್ಲೋಟ್, ಸಿಎಂ ಬೊಮ್ಮಾಯಿ

ಬೆಂಗಳೂರು: ಎರಡು ದಿನಗಳ ಪ್ರವಾಸ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ್ದು, ಯಲಹಂಕ ವಾಯುನೆಲೆಗೆ ಆಗಮಿಸಿದ ಪ್ರಧಾನಿಯವರನ್ನು ಬಿಜೆಪಿ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡರು.

ದೆಹಲಿಯಿಂದ ಭಾರತೀಯ ವಾಯುಸೇನೆ ವಿಶೇಷ ವಿಮಾನ K-5014 ವಿಮಾನದಲ್ಲಿ ಯಲಹಂಕ ವಾಯುನೆಲೆ ಬಂದಿಳಿದ ಪ್ರಧಾನಿ ಮೋದಿಯವರನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಶ ನಳೀನ್ ಕುಮಾರ್ ಕಟೀಲ್ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು, ಕಾರ್ಯಕರ್ತರು ಹೂ ಗುಚ್ಛ ನೀಡಿ ಸ್ವಾಗತಿಸಿದರು.

ಯಲಹಂಕ ವಾಯುನೆಲೆಯಿಂದ ನೇರವಾಗಿ ಬೆಂಗಳೂರಿನ ಭಾರತೀಯ ವಿಜ್ಞಾನ ಭವನಕ್ಕೆ ತೆರಳಲಿದ್ದು, ಅಲ್ಲಿ ಮೆದುಳು ಸಂಶೋಧನಾ ಕೇಂದ್ರ ಉದ್ಘಾಟಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...