ಇಥಿಯೋಪಿಯಾದಿಂದ ಬೆಂಗಳೂರಿಗೆ ಬಂದಿಳಿದ ವ್ಯಕ್ತಿಯೊಬ್ಬರಲ್ಲಿ ಮಂಕಿ ಫಾಕ್ಸ್ ರೋಗ ಲಕ್ಷಣಗಳು ಕಂಡು ಬಂದ ಹಿನ್ನಲೆಯಲ್ಲಿ ಮಂಕಿ ಫಾಕ್ಸ್ ರಾಜ್ಯಕ್ಕೂ ಕಾಲಿಟ್ಟಿದೆಯಾ ಎಂಬ ಆತಂಕಕ್ಕೆ ಕಾರಣವಾಗಿತ್ತು.
ಇದೀಗ ಆರೋಗ್ಯ ಸಚಿವ ಡಾ. ಸುಧಾಕರ್ ಈ ಕುರಿತು ಸ್ಪಷ್ಟನೆ ನೀಡಿದ್ದು, ಈ ವ್ಯಕ್ತಿಗಯಲ್ಲಿದ್ದದ್ದು ಮಂಕಿ ಫಾಕ್ಸ್ ಅಲ್ಲ ಚಿಕನ್ ಫಾಕ್ಸ್ ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವರು ಟ್ವೀಟ್ ಮಾಡಿದ್ದು, ಬೆಂಗಳೂರಿಗೆ ಬಂದಿಳಿದಿದ್ದ ಇಥಿಯೋಪಿಯಾ ಮೂಲದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಲಕ್ಷಣಗಳು ಕಂಡುಬಂದಿದ್ದ ಹಿನ್ನೆಲೆಯಲ್ಲಿ ಅವರನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಈಗ ಅವರ ಪರೀಕ್ಷಾ ವರದಿಯಲ್ಲಿ ಮಂಕಿಪಾಕ್ಸ್ ನೆಗಟೀವ್ ಎಂದು ಧೃಢಪಟ್ಟಿದ್ದು, ಚಿಕನ್ ಪಾಕ್ಸ್ ಇರುವುದು ಪತ್ತೆಯಾಗಿದೆ ಎಂದಿದ್ದಾರೆ.