alex Certify BIG BREAKING: ಬೆಂಗಳೂರಿಗೆ ಬಂದಿಳಿದಿದ್ದ ಇಥಿಯೋಪಿಯಾ ಮೂಲದ ವ್ಯಕ್ತಿಯಲ್ಲಿದ್ದದ್ದು ‌ʼಮಂಕಿ ಫಾಕ್ಸ್‌ʼ ಅಲ್ಲ ʼಚಿಕನ್‌ ಫಾಕ್ಸ್ʼ; ಆರೋಗ್ಯ ಸಚಿವರ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಬೆಂಗಳೂರಿಗೆ ಬಂದಿಳಿದಿದ್ದ ಇಥಿಯೋಪಿಯಾ ಮೂಲದ ವ್ಯಕ್ತಿಯಲ್ಲಿದ್ದದ್ದು ‌ʼಮಂಕಿ ಫಾಕ್ಸ್‌ʼ ಅಲ್ಲ ʼಚಿಕನ್‌ ಫಾಕ್ಸ್ʼ; ಆರೋಗ್ಯ ಸಚಿವರ ಸ್ಪಷ್ಟನೆ

ಇಥಿಯೋಪಿಯಾದಿಂದ ಬೆಂಗಳೂರಿಗೆ ಬಂದಿಳಿದ ವ್ಯಕ್ತಿಯೊಬ್ಬರಲ್ಲಿ ಮಂಕಿ ಫಾಕ್ಸ್‌ ರೋಗ ಲಕ್ಷಣಗಳು ಕಂಡು ಬಂದ ಹಿನ್ನಲೆಯಲ್ಲಿ ಮಂಕಿ ಫಾಕ್ಸ್‌ ರಾಜ್ಯಕ್ಕೂ ಕಾಲಿಟ್ಟಿದೆಯಾ ಎಂಬ ಆತಂಕಕ್ಕೆ ಕಾರಣವಾಗಿತ್ತು.

ಇದೀಗ ಆರೋಗ್ಯ ಸಚಿವ ಡಾ. ಸುಧಾಕರ್‌ ಈ ಕುರಿತು ಸ್ಪಷ್ಟನೆ ನೀಡಿದ್ದು, ಈ ವ್ಯಕ್ತಿಗಯಲ್ಲಿದ್ದದ್ದು ಮಂಕಿ ಫಾಕ್ಸ್‌ ಅಲ್ಲ ಚಿಕನ್‌ ಫಾಕ್ಸ್‌ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವರು ಟ್ವೀಟ್‌ ಮಾಡಿದ್ದು, ಬೆಂಗಳೂರಿಗೆ ಬಂದಿಳಿದಿದ್ದ ಇಥಿಯೋಪಿಯಾ ಮೂಲದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಲಕ್ಷಣಗಳು ಕಂಡುಬಂದಿದ್ದ ಹಿನ್ನೆಲೆಯಲ್ಲಿ ಅವರನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಈಗ ಅವರ ಪರೀಕ್ಷಾ ವರದಿಯಲ್ಲಿ ಮಂಕಿಪಾಕ್ಸ್ ನೆಗಟೀವ್ ಎಂದು ಧೃಢಪಟ್ಟಿದ್ದು, ಚಿಕನ್ ಪಾಕ್ಸ್ ಇರುವುದು ಪತ್ತೆಯಾಗಿದೆ ಎಂದಿದ್ದಾರೆ.

ರಾಜ್ಯದಲ್ಲಿ ಮಂಕಿಪಾಕ್ಸ್ ತಡೆಗಟ್ಟುವ ನಿಟ್ಟಿನಲ್ಲಿ ಸೋಂಕು ಕಂಡುಬಂದಿರುವ ದೇಶಗಳಿಂದ ಆಗಮಿಸುವ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲೇ ಜ್ವರ, ಶೀತ, ತಲೆನೋವು, ಸ್ನಾಯು ನೋವು, ಆಯಾಸ ಮತ್ತು ದುಗ್ಧರಸ ಗ್ರಂಥಿಗಳ ಊತ ಮುಂತಾದ ಲಕ್ಷಣಗಳ ಪತ್ತೆಗಾಗಿ ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...