ಬೆಳಗಾವಿ: ಕುಂದಾನಗರಿ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎಂಇಎಸ್ ಗೆ ತೀವ್ರ ಮುಖಭಂಗವಾಗಿದ್ದು, ಬಿಜೆಪಿ ವಿಜಯ ಪತಾಕೆ ಹಾರಿಸಿದೆ.
ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 30 ವಾರ್ಡ್ ಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿಗೆ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಈ ಮೂಲಕ ಭಾಷೆಯ ಮೇಲೆ ಹಿಡಿತ ಸಾಧಿಸಲು ಮುಂದಾಗಿದ್ದ ಎಂಇಎಸ್ ಪುಂಡಾಟಕ್ಕೆ ಬ್ರೇಕ್ ಬಿದ್ದಂತಾಗಿದೆ.
ಕೇರಳದಲ್ಲಿದೆ ʼಪೌಲ್ ಕೊಯೆಲೋʼ ಹೆಸರಿನ ಆಟೋ…! ಇಂಟ್ರಸ್ಟಿಂಗ್ ಆಗಿದೆ ಇದರ ಹಿಂದಿನ ಕಾರಣ
ಬಿಜೆಪಿ 30, ಕಾಂಗ್ರೆಸ್ 7, ಎಂಇಎಸ್ 2, ಪಕ್ಷೇತರ 5 ಹಾಗೂ ಎಐಎಂಐಎಂ 1 ವಾರ್ಡ್ ನಲ್ಲಿ ಗೆಲುವು ಸಾಧಿಸಿದೆ. 25 ವರ್ಷಗಳ ಬಳಿಕ ಬಿಜೆಪಿ ಈ ಬಾರಿ ಪಾಲಿಕೆ ಚುನಾವಣೆಯಲ್ಲಿ ಪಕ್ಷದ ಚಿಹ್ನೆ ಆಧಾರದ ಮೇಲೆ ಚುನಾವಣೆ ಎದುರಿಸಿತ್ತು. ಇದೀಗ ಬಿಜೆಪಿ ಮೊದಲ ಬಾರಿ ಬೆಳಗಾವಿ ಪಾಲಿಕೆಯಲ್ಲಿ ಗೆಲುವು ಸಾಧಿಸಿದ್ದು, ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ.