alex Certify BIG BREAKING: ಬೆಳ್ಳಂಬೆಳಿಗ್ಗೆ ಬೆಂಗಳೂರಿನಲ್ಲಿ ಭೀಕರ ಅಪಘಾತ – 7 ಮಂದಿ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಬೆಳ್ಳಂಬೆಳಿಗ್ಗೆ ಬೆಂಗಳೂರಿನಲ್ಲಿ ಭೀಕರ ಅಪಘಾತ – 7 ಮಂದಿ ದುರ್ಮರಣ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಐಷಾರಾಮಿ ಆಡಿ ಕ್ಯೂ 3 ಕಾರು ಲೈಟ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸೇರಿದಂತೆ ಒಟ್ಟು 7 ಮಂದಿ ಸಾವಿಗೀಡಾಗಿದ್ದಾರೆಂದು ತಿಳಿದುಬಂದಿದೆ.

ಬೆಳಗಿನ ಜಾವ 1-30 ರ ಸುಮಾರಿಗೆ ಕೋರಮಂಗಲದ ಮಂಗಳ ಕಲ್ಯಾಣ ಮಂದಿರದ ಬಳಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಫುಟ್‌ ಮೇಲೇರಿದ ಕಾರು ಬಳಿಕ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಕಾರಿನಲ್ಲಿದ್ದವರು ಯಾರು ಹಾಗೂ ಎಲ್ಲಿಂದ ಬರುತ್ತಿದ್ದರು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಅಪಘಾತ ಸಂಭವಿಸಿದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಏಳು ಮಂದಿಯೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...