ಮಹತ್ವದ ಬೆಳವಣಿಗೆಯೊಂದರಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅದಾನಿ ಸಮೂಹದ ಕಂಪನಿಗಳಿಗೆ ಬ್ಯಾಂಕುಗಳು ನೀಡಿರುವ ಸಾಲವೂ ಸೇರಿದಂತೆ ವಿವಿಧ ಮಾಹಿತಿಗಳನ್ನು ಕೇಳಿದೆ ಎಂದು ತಿಳಿದುಬಂದಿದೆ.
ಗೌತಮ್ ಅದಾನಿ ಒಡೆತನದ ಅದಾನಿ ಸಮೂಹ 20,000 ಕೋಟಿ ರೂಪಾಯಿ ಎಫ್ ಪಿ ಓ ಫಾಲೋ ಆನ್ ಪಬ್ಲಿಕ್ ಆಫರ್ ಷೇರುಗಳ ಮಾರಾಟವನ್ನು ಹಿಂಪಡೆದ ಬಳಿಕ ಈ ಬೆಳವಣಿಗೆ ನಡೆದಿದೆ.
ಇದರ ಮಧ್ಯೆ ಅದಾನಿ ಸಮೂಹದ ಕಂಪನಿಗಳ ಷೇರುಗಳ ಬೆಲೆಯಲ್ಲಿ ಇಳಿಕೆಯಾಗುತ್ತಿದ್ದು, ವಿಶ್ವ ಸಿರಿವಂತರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದ ಗೌತಮ್ ಅದಾನಿ ಈಗ 15ನೇ ಸ್ಥಾನಕ್ಕೆ ಬಂದು ತಲುಪಿದ್ದಾರೆ.