alex Certify BIG BREAKING: ಭಟ್ಕಳ; ಮಹಾಮಳೆಗೆ ಮನೆಯ ಮೇಲೆ ಕುಸಿದ ಗುಡ್ಡ; ಒಂದೇ ಕುಟುಂಬದ ನಾಲ್ವರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಭಟ್ಕಳ; ಮಹಾಮಳೆಗೆ ಮನೆಯ ಮೇಲೆ ಕುಸಿದ ಗುಡ್ಡ; ಒಂದೇ ಕುಟುಂಬದ ನಾಲ್ವರ ದುರ್ಮರಣ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ.

ಭಟ್ಕಳ ತಾಲೂಕಿನ ಮುಟ್ಟಳ್ಳಿಯಲ್ಲಿ ರಾತ್ರಿಯಿಂದ ಸುರಿದ ಧಾರಾಕಾರ ಮಳೆಗೆ ಮನೆಯ ಮೇಲೆ ಗುಡ್ಡ ಕುಸಿದು, ಮನೆ ಸಂಪೂರ್ಣ ನೆಲಸಮವಾಗಿದೆ. ದುರಂತದಲ್ಲಿ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದುದೆ.

ಲಕ್ಷ್ಮಿ ನಾರಾಯಣ ನಾಯ್ಕ, ಮಗ ಅನಂತ ನಾರಾಯಣ ನಾಯ್ಕ್, ಮಗಳು ಲಕ್ಷ್ಮಿ ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಜೆಸಿಬಿ ಮೂಲಕ ಮಣ್ಣು ತೆಗೆಯುವ ಕೆಲಸ ನಡೆಯುತ್ತಿದೆ.

ಅಗ್ನಿಶಾಮಕ ಸಿಬ್ಬಂದಿ, ಪೊಲಿಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...