alex Certify BIG BREAKING: ಭಾರಿ ಮಳೆ ನಡುವೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಏರಿಕೆ; ಒಂದೇ ದಿನದಲ್ಲಿ 45 ಜನ ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಭಾರಿ ಮಳೆ ನಡುವೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಏರಿಕೆ; ಒಂದೇ ದಿನದಲ್ಲಿ 45 ಜನ ಮಹಾಮಾರಿಗೆ ಬಲಿ

ನವದೆಹಲಿ: ಮಳೆಯ ಆರ್ಭಟದ ನಡುವೆಯೇ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 16,906 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ದಿಢೀರ್ ಏರಿಕೆಯಾಗಿದ್ದು, 24 ಗಂಟೆಯಲ್ಲಿ 45 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,25,519 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,32,457 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 15,447 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,30,11,874 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 11,15,068 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,99,12,79,010 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 4,59,302 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...