ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.
ಹುಬ್ಬಳ್ಳಿಯ ಜಿಗಳೂರು ಬಳಿ ಕಾರು ದರ್ಗಾಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದ್ದು, ಕುಟುಂಬದ ಮೂವರು ಸದಸ್ಯರು ಸಾವನ್ನಪ್ಪಿದ್ದಾರೆ. ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಹುಬ್ಬಳ್ಳಿ-ಪುಣೆ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ.
ಹನುಮಂತಪ್ಪ ಬೇವಿನ ಕಟ್ಟಿ, ರೇಣುಕಾ ಬೇವಿನ ಕಟ್ಟಿ ಹಾಗೂ ಅಳಿಯ ರವೀಂದ್ರ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇನ್ನೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರು ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ತೆರಳುತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ಕಾರು ಚಾಲಕನ ನಿರ್ಲಕ್ಷವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.