alex Certify BIG BREAKING: ಭೀಕರ ಕಾರು ಅಪಘಾತ; ಒಂದೇ ಕುಟುಂಬದ ಮೂವರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಭೀಕರ ಕಾರು ಅಪಘಾತ; ಒಂದೇ ಕುಟುಂಬದ ಮೂವರ ದುರ್ಮರಣ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.

ಹುಬ್ಬಳ್ಳಿಯ ಜಿಗಳೂರು ಬಳಿ ಕಾರು ದರ್ಗಾಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದ್ದು, ಕುಟುಂಬದ ಮೂವರು ಸದಸ್ಯರು ಸಾವನ್ನಪ್ಪಿದ್ದಾರೆ. ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಹುಬ್ಬಳ್ಳಿ-ಪುಣೆ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ.

ಹನುಮಂತಪ್ಪ ಬೇವಿನ ಕಟ್ಟಿ, ರೇಣುಕಾ ಬೇವಿನ ಕಟ್ಟಿ ಹಾಗೂ ಅಳಿಯ ರವೀಂದ್ರ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇನ್ನೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರು ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ತೆರಳುತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ಕಾರು ಚಾಲಕನ ನಿರ್ಲಕ್ಷವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...