ಬೆಂಗಳೂರು: ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ.
ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ನಿರ್ಧರಿಸಲಾಗಿದೆ. ಈ ಮೂಲಕ ಶೀಘ್ರದಲ್ಲಿಯೇ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಾಗಲಿದೆ.
ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆಯೂ ಚರ್ಚೆಯಾಗಿದ್ದು, ಮೀಸಲಾತಿ ವಿಚಾರವಾಗಿ ಕೋರ್ಟ್ ಮೊರೆ ಹೋಗಲು ತೀರ್ಮಾನಿಸಲಾಗಿದೆ.