alex Certify BIG BREAKING: ಮತ್ತಷ್ಟು ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ; ಬದಲಾಗದ ಸಾವಿನ ಸಂಖ್ಯೆ; 24 ಗಂಟೆಯಲ್ಲಿ ಮತ್ತೆ 302 ಜನ ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮತ್ತಷ್ಟು ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ; ಬದಲಾಗದ ಸಾವಿನ ಸಂಖ್ಯೆ; 24 ಗಂಟೆಯಲ್ಲಿ ಮತ್ತೆ 302 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 13,166 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಕೊಂಚ ಏರಿಕೆಯಾಗಿದ್ದು, 24 ಗಂಟೆಯಲ್ಲಿ ಮತ್ತೆ 302 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 513226 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 134235 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 26988 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42246884 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 32,04,426 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,76,86,89,266 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 11,55,147 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...