alex Certify BIG BREAKING: ಮತ್ತಷ್ಟು ಕುಸಿತ ಕಂಡ ಕೋವಿಡ್ ಕೇಸ್; ಆದರೆ ಏರುತ್ತಲೇ ಇದೆ ಸಾವಿನ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮತ್ತಷ್ಟು ಕುಸಿತ ಕಂಡ ಕೋವಿಡ್ ಕೇಸ್; ಆದರೆ ಏರುತ್ತಲೇ ಇದೆ ಸಾವಿನ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 5,921 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಆದರೆ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. 24 ಗಂಟೆಯಲ್ಲಿ ಮತ್ತೆ 289 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 514878 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 63878 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 11651 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42378721 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 24,62,562 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,78,55,66,940 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 9,40,905 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...