alex Certify BIG BREAKING: ಮತ್ತೆ ಏರಿಕೆಯಾದ ಕೊರೊನಾ ಸೋಂಕಿತರ ಸಂಖ್ಯೆ; ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮತ್ತೆ ಏರಿಕೆಯಾದ ಕೊರೊನಾ ಸೋಂಕಿತರ ಸಂಖ್ಯೆ; ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 1,778 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ 62 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,16,605 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 23,087 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2,542 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,24,73,057 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 30,53,897 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,81,89,15,234 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 6,77,218 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...