alex Certify BIG BREAKING: ಮತ್ತೆ ಏರಿಕೆಯಾಯ್ತು ಕೊರೊನಾ ಸೋಂಕಿತರ ಸಂಖ್ಯೆ; ಒಂದೇ ದಿನದಲ್ಲಿ 318 ಜನರು ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮತ್ತೆ ಏರಿಕೆಯಾಯ್ತು ಕೊರೊನಾ ಸೋಂಕಿತರ ಸಂಖ್ಯೆ; ಒಂದೇ ದಿನದಲ್ಲಿ 318 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 22,431 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 3,38,94,312ಕ್ಕೆ ಏರಿಕೆಯಾಗಿದೆ.

ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 318 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 449856 ಕ್ಕೆ ಏರಿಕೆಯಾಗಿದೆ.

ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನರಿಗೆ ಬಿಗ್ ಶಾಕ್: 3 ತಿಂಗಳಲ್ಲಿ 90 ರೂ. ಏರಿಕೆಯಾದ LPG ಸಿಲಿಂಡರ್ ದರ; ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತುಗಳ ಬೆಲೆಯೂ ಗಗನಕ್ಕೆ

ಇನ್ನು ದೇಶದಲ್ಲಿ 244198 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 24602 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33200258 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 14,31,819 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 43,09,525 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 92,63,68,608 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...