alex Certify BIG BREAKING: ಮತ್ತೆ ಹೆಚ್ಚುತ್ತಿದೆ ಕೊರೊನಾ ಸೋಂಕು; ಒಂದೇ ದಿನದಲ್ಲಿ 20,557 ಹೊಸ ಪ್ರಕರಣ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮತ್ತೆ ಹೆಚ್ಚುತ್ತಿದೆ ಕೊರೊನಾ ಸೋಂಕು; ಒಂದೇ ದಿನದಲ್ಲಿ 20,557 ಹೊಸ ಪ್ರಕರಣ ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 20,557 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಕುಸಿತವಾಗಿದ್ದು, 24 ಗಂಟೆಯಲ್ಲಿ 44 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,26,211ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,46,323 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.47ರಷ್ಟು ಜನಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,32,86,787 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 40,69,241 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,03,21,82,347 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,96,783 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...