alex Certify BIG BREAKING: ಮತ್ತೆ 7,145 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; ಒಂದೇ ದಿನದಲ್ಲಿ 289 ಮಂದಿ ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮತ್ತೆ 7,145 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; ಒಂದೇ ದಿನದಲ್ಲಿ 289 ಮಂದಿ ಮಹಾಮಾರಿಗೆ ಬಲಿ

ನವದೆಹಲಿ: ಕೊರೊನಾ ರೂಪಾಂತರಿ ವೈರಸ್ ಒಮಿಕ್ರಾನ್ ಪ್ರಕರಣ ಹೆಚ್ಚುತ್ತಿರುವ ಬೆನ್ನಲ್ಲೇ ದೇಶದಲ್ಲಿ ಕಳೆದ 24 ಗಂಟೆಯಲ್ಲಿ 7,145 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿಯೂ ಕೊಂಚ ಇಳಿಕೆಯಾಗಿದ್ದು, ಒಂದೇ ದಿನದಲ್ಲಿ 289 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 477158 ಕ್ಕೆ ಏರಿಕೆಯಾಗಿದೆ.

ಇಲ್ಲಿದೆ 2021ರಲ್ಲಿ ನೆಟ್ಟಿಗರಿಗೆ ಮನೋರಂಜನೆ ಕೊಟ್ಟ ಮದುವೆ ವಿಡಿಯೋಗಳ ಪಟ್ಟಿ

ಇನ್ನು ದೇಶದಲ್ಲಿ 84565 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 8706 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34171471 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 12,45,402 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 62,06,244 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,36,66,05,173 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...