ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 8,822 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಅಂದರೆ ನಿನ್ನೆಗಿಂತ 2,228 ರಷ್ಟು ಹೆಚ್ಚು ಕೇಸ್ ದಾಖಲಾಗಿವೆ.
ಇನ್ನು ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 15 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,24,792ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 53,637 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 5,718 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,26,67,088 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ
ನಿನ್ನೆ 13,58,607 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,95,50,87,271 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,40,278 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.