ಮಹಾರಾಷ್ಟ್ರ ವಿಧಾನಸಭೆಯ ಪ್ರತಿಪಕ್ಷ ನಾಯಕರಾಗಿ ಅಜಿತ್ ಪವಾರ್ ಆಯ್ಕೆಯಾಗಿದ್ದಾರೆ. ಉದ್ದವ್ ಠಾಕ್ರೆ ಸಂಪುಟದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಅವರು ಸರ್ಕಾರ ಪತನಗೊಂಡ ನಂತರ ಪ್ರತಿಪಕ್ಷದ ನಾಯಕರಾಗಿದ್ದಾರೆ.
ಎನ್.ಸಿ.ಪಿ. ನಾಯಕ ಶರದ್ ಪವಾರ್ ಸೋದರಳಿಯರಾಗಿರುವ ಅಜಿತ್ ಪವಾರ್ ಬಾರಾಮತಿ ಕ್ಷೇತ್ರದಿಂದ ಒಮ್ಮೆ ಸಂಸದರಾಗಿ ಆಯ್ಕೆಯಾಗಿದ್ದರು. ಅಲ್ಲದೇ ಬಾರಾಮತಿ ವಿಧಾನಸಭಾ ಕ್ಷೇತ್ರದಿಂದ 7 ಬಾರಿ ಆಯ್ಕೆಯಾಗಿದ್ದಾರೆ.