ಬೆಳಗಾವಿ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ತೆರಳುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟಪ್ರಭಾ ಎಡದಂಡೆ ಕಾಲುವೆಗೆ ಕಾರು ಪಲ್ಟಿಯಾಗಿ ಬಿದ್ದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಅಡ್ಡ ಬಂದ ಬೈಕ್ ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರು ಘಟಪ್ರಭಾ ಎಡದಂಡೆ ಕಾಲುವೆಗೆ ಉರುಳಿದೆ. ಕಾರಿನಲ್ಲಿದ್ದ ಲಕ್ಷ್ಮಣ ಸವದಿ ಅವರಿಗೆ ಗಾಯಗಳಾಗಿದ್ದು ರಾಯಭಾಗ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜತ್ತ ಜಾಂಬೋಟ್ ರಾಜ್ಯ ಹೆದ್ದಾರಿ 31ರಲ್ಲಿ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಅಪಘಾತದಲ್ಲಿ ಮಾಜಿ ಡಿಸಿಎಂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.