alex Certify BIG BREAKING: ಮಾಡಾಳ್ ವಿರೂಪಾಕ್ಷಪ್ಪನವರಿಗೆ ಬಿಗ್‌ ರಿಲೀಫ್;‌ ಹೈಕೋರ್ಟ್‌ ನಿಂದ ನಿರೀಕ್ಷಣಾ ಜಾಮೀನು ಮಂಜೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮಾಡಾಳ್ ವಿರೂಪಾಕ್ಷಪ್ಪನವರಿಗೆ ಬಿಗ್‌ ರಿಲೀಫ್;‌ ಹೈಕೋರ್ಟ್‌ ನಿಂದ ನಿರೀಕ್ಷಣಾ ಜಾಮೀನು ಮಂಜೂರು

ತಮ್ಮ ಪುತ್ರನ ಕಚೇರಿ ಹಾಗೂ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಹಣ ಪತ್ತೆಯಾದ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಚನ್ನಗಿರಿ ಕ್ಷೇತ್ರದ ಮಾಡಾಳ್ ವಿರೂಪಾಕ್ಷಪ್ಪನವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ.

ಮಧ್ಯಂತರ ನಿರೀಕ್ಷಣಾ ಜಾಮೀನು ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕ ಪೀಠದ ನ್ಯಾಯಮೂರ್ತಿ ನಟರಾಜನ್ ಅಂಗೀಕರಿಸಿದ್ದು, ಹೀಗಾಗಿ ವಿರುಪಾಕ್ಷಪ್ಪನವರಿಗೆ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ.

48 ಗಂಟೆಯೊಳಗಾಗಿ ಲೋಕಾಯುಕ್ತದ ವಿಚಾರಣಾಧಿಕಾಗಳ ಮುಂದೆ ಹಾಜರಾಗುವಂತೆ ನ್ಯಾಯಾಲಯ ಆದೇಶಿಸಿದ್ದು, ಇಬ್ಬರ ಶ್ಯೂರಿಟಿ ಹಾಗೂ  ಐದು  ಲಕ್ಷ ರೂಪಾಯಿ ಠೇವಣಿಯೊಂದಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...