ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೆಲವೇ ಕ್ಷಣಗಳಲ್ಲಿ ರಾಜಭವನಕ್ಕೆ ತೆರಳಿ ಯಡಿಯೂರಪ್ಪ ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ.
ತಮ್ಮ ರಾಜೀನಾಮೆ ವಿಚಾರ ಘೋಷಿಸುವ ಸಂದರ್ಭದಲ್ಲಿ ಯಡಿಯೂರಪ್ಪ ಗದ್ಗದಿತರಾಗಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ಪೂರೈಸಿರುವ ಬೆನ್ನಲ್ಲೇ ಸಾಧನಾ ಸಮಾವೇಶದ ವೇಳೆ ಭಾವುಕರಾಗಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ವರಿಷ್ಠರ ಸೂಚನೆಯಂತೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದು, ಮಧ್ಯಾಹ್ನ ಊಟದ ಬಳಿಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸುತ್ತೇನೆ. ಇದು ದು:ಖದಿಂದ ಅಲ್ಲ, ಸಂತೋಷದಿಂದಲೇ ನಾನು ರಾಜೀನಾಮೆ ನೀಡುತ್ತೀದ್ದೇನೆ ಎಂದರು.
75 ವರ್ಷ ದಾಟಿದ ಯಡಿಯೂರಪ್ಪನವರಿಗೆ ಮತ್ತೆ 2 ವರ್ಷ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಟ್ಟ ಪ್ರಧಾನಿ ಮೋದಿ, ಅಮಿತ್ ಶಾ, ನಡ್ಡಾ ಅವರಿಗೆ ಶಬ್ಧಗಳಲ್ಲಿ ಅಭಿನಂದನೆ ಸಲ್ಲಿಸಲು ಸಾಧ್ಯವಿಲ್ಲ, ಸಂತೃಪ್ತಿಯಿಂದಲೇ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮತ್ತೊಮ್ಮೆ ಗದ್ಗದಿತರಾದರು.