ಬೆಂಗಳೂರು: ಜುಲೈ 5ರ ಬಳಿಕ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಮುಂದಾಗುವ ಸುಳಿವು ನೀಡಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಸಾರಿಗೆ ಸಿಬ್ಬಂದಿಗೆ ಬಿಗ್ ಶಾಕ್ ನೀಡಿದ್ದು, ಅಗತ್ಯ ಸೇವೆಗಳ ಮುಷ್ಕರ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮಾರುಕಟ್ಟೆಗೆ ಬಂತು ಶುಗರ್ ಲೆಸ್ ಮಾವಿನಹಣ್ಣು…!
ಆರ್ಥಿಕತೆಯ ಮೇಲೆ ಕೋವಿಡ್ ಸಾಕಷ್ಟು ಪ್ರಭಾವ ಬೀರಿದೆ. ಈ ಸಂದರ್ಭದಲ್ಲಿ ಮುಷ್ಕರ ನಡೆಸುವುದು ಸೂಕ್ತವಲ್ಲ. ಜುಲೈ 1ರಿಂದ ಡಿಸೆಂಬರ್ 31ರವರೆಗೆ ಸಾರಿಗೆ ಸಿಬ್ಬಂದಿ ಮುಷ್ಕರ ನಿಷೇಧಿಸಲಾಗಿದೆ. ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣೆ ಕಾಯ್ದೆ 3 ಉಪವಿಭಾಗ 1ರ ಅನ್ವಯ ಅಗತ್ಯ ಸೇವೆಗಳ ಮುಷ್ಕರ ನಿಷೇಧ ಮಾಡಲಾಗಿದೆ ಎಂದು ಸರ್ಕಾರ ಆದೇಶ ನೀಡಿದೆ.