
ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದ್ದು, 24 ಗಂಟೆಯಲ್ಲಿ 42 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,25,428ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 1,28,690 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 14,553 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,29,68,533 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 10,21,164 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,98,76,59,299 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 4,32,777 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.