ಬೆಂಗಳೂರು: ಬೆಳಗಾವಿ ಜಿಲ್ಲಾಸ್ಪತ್ರೆ ಬಿಮ್ಸ್ ಗೆ ದಾಖಲಾಗಿದ್ದ ಮೂವರು ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಚುಚ್ಚುಮದ್ದಿನ ಅಡ್ಡ ಪರಿಣಾಮ ಕಾರಣ ಎಂಬುದು ಬಹುತೇಕ ಖಚಿತವಾಗಿದೆ. ಇದೀಗ ಈ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ನೀಡಿರುವ ಮಾಹಿತಿ ಪ್ರಕಾರ ಸೆಪ್ಟಿಕ್ ಶಾರ್ಟ್ ಸಿಂಡ್ರೋಮ್ ನಿಂದ ಮೃತಪಟ್ಟಿರಬಹುದು ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜನವರಿ 12ರಂದು ನಾಲ್ವರು ಮಕ್ಕಳಿಗೆ ಚುಚ್ಚು ಮದ್ದು ಹಾಕಲಾಗಿತ್ತು ಎಂದು ತಿಳಿದುಬಂದಿದೆ. ಮೂವರು ಮಕ್ಕಳು ಮೃತಪಟ್ಟಿದ್ದಾರೆ. ಸೆಪ್ಟಿಕ್ ಶಾರ್ಟ್ ಸಿಂಡ್ರೋಮ್ ನಿಂದ ಮೃತಪಟ್ಟಿರಬಹುದು. ಈ ಬಗ್ಗೆ ತನಿಖೆ ಮಾಡಿ ವರದಿ ನೀಡುವಂತೆ ಆದೇಶ ನೀಡಲಾಗಿದೆ ಎಂದರು.
ತನಿಖೆಗಾಗಿ ನೋಡಲ್ ಅಧಿಕಾರಿಗಳನ್ನು ಕಳುಹಿಸಲಾಗುವುದು. ಎರಡು ದಿನಗಳಲ್ಲಿ ವರದಿ ನೀಡುವಂತೆ ಸೂಚಿಸಿದ್ದೇನೆ. ಪ್ರಕರಣ ಸಂಬಂಧ ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡುವಂತೆ ಸೂಚಿಸಿದ್ದೇನೆ. ಎ ಎನ್ ಎಂ, ಫಾರ್ಮಸಿಸ್ಟ್ ಅಮಾನತು ಮಾಡುವಂತೆ ಸೂಚಿಸಿದ್ದೇನೆ. ವರದಿ ಬಂದ ಬಳಿಕ ಸ್ಪಷ್ಟ ಮಾಹಿತಿ ನೀಡುತ್ತೇನೆ ಎಂದು ಹೇಳಿದರು.