ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಅವಾಂತರದ ನಡುವೆಯೇ ಅಗ್ನಿ ಅವಘಡ ಸಂಭವಿಸಿದ್ದು, ಮೆಡಿಕಲ್ ಗೋಡೌನ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ.
ಬೆಂಗಳೂರಿನ ಸುಂಕದಕಟ್ಟೆಯಲ್ಲಿರುವ ರಾಶಿ ಫಾರ್ಮಾ ಎಂಬ ಮೆಡಿಕಲ್ ಗೋಡೌನ್ ನಲ್ಲಿ ಕೆಮಿಕಲ್ ಸಿಲಿಂಡರ್ ಸ್ಫೋಟಗೊಂಡಿದ್ದು, ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸಿಲಿಂಡರ್ ಸ್ಫೋಟಗೊಳ್ಳುತ್ತಿದ್ದಂತೆ ಕಟ್ಟಡದಲ್ಲಿದ್ದ ಜನರು ಹೊರಗೋಡಿ ಬಂದಿದ್ದಾರೆ. ನೋಡ ನೋಡುತ್ತಿದ್ದಂತೆ ಕಟ್ಟಡದ ತುಂಬ ಬೆಂಕಿ ಹೊತ್ತಿಕೊಂಡು ಉರಿದಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಲಕ್ಷಾಂತರ ರೂಪಾಯಿ ಮೌಲ್ಯಗಳ ಮೆಡಿಸಿನ್ ಗಳು ಬೆಂಕಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ.