ರಾಂಚಿ: ಮೇವು ಹಗರಣಕ್ಕೆ ಸಂಬಂಧಪಟ್ಟಂತೆ ಬಿಹಾರ ಮಾಜಿ ಸಿಎಂ, ಆರ್ ಜೆ ಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಸಿಬಿಐ ವಿಶೇಷ ನ್ಯಾಯಾಲಯ ಲಾಲು ಪ್ರಸಾದ್ ಯಾದವ್ ದೋಷಿ ಎಂದು ತೀರ್ಪು ನೀಡಿದೆ.
ಹಗರಣದಲ್ಲಿ ಆರ್ ಜೆ ಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಸೇರಿದಂತೆ 75 ಆರೋಪಿಗಳು ಅಪರಾಧಿಗಳಾಗಿದ್ದು, 25 ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ ಎಂದು ರಾಂಚಿ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಕದ್ದ ಯಂತ್ರದ ಪತ್ತೆಗಾಗಿ ಪೊಲೀಸರಿಂದ ಬರೋಬ್ಬರಿ 45 ಸಿಸಿ ಕ್ಯಾಮರಾಗಳ ಪರಿಶೀಲನೆ
ಮೇವು ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 4 ಪ್ರಕರಣಗಳಲ್ಲಿ ಲಾಲು ಪ್ರಸಾದ್ ಯಾದವ್ ಅಪರಾಧಿ ಎಂದು ತೀರ್ಪು ನೀಡಿದ್ದು, ಇದೀಗ 5ನೇ ಪ್ರಕರಣದಲ್ಲಿಯೂ ಲಾಲು ಪ್ರಸಾದ್ ಯಾದವ್ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ.