alex Certify BIG BREAKING: ಮೈತ್ರಿ ಪ್ರಶ್ನೆಯೇ ಇಲ್ಲ; ಬೆಂಬಲ ಸ್ಥಳೀಯ ನಾಯಕರಿಗೆ ಬಿಟ್ಟ ವಿಚಾರ; ಎರಡೂ ಪಕ್ಷಗಳ ವಿರುದ್ಧ JDS ಹೋರಾಡಲಿದೆ ಎಂದ HDK | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮೈತ್ರಿ ಪ್ರಶ್ನೆಯೇ ಇಲ್ಲ; ಬೆಂಬಲ ಸ್ಥಳೀಯ ನಾಯಕರಿಗೆ ಬಿಟ್ಟ ವಿಚಾರ; ಎರಡೂ ಪಕ್ಷಗಳ ವಿರುದ್ಧ JDS ಹೋರಾಡಲಿದೆ ಎಂದ HDK

ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಊಹಾಪೋಹಕ್ಕೆ ತೆರೆ ಎಳೆದಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಮೈತ್ರಿ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಕುಮಾರಸ್ವಾಮಿ, ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ನಿಲುವಿನ ಬಗ್ಗೆ ಸಾಕಷ್ಟು ಕುತೂಹಲವಿದೆ. ಜೆಡಿಎಸ್ 6 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧಿಸಿದೆ. ಹಾಗಾಗಿ ಜೆಡಿಎಸ್ ಅಭ್ಯರ್ಥಿ ನಿಲ್ಲದ ಕಡೆಗಳಲ್ಲಿ ಬಿಜೆಪಿಗೆ ಬೆಂಬಲಿಸಿ ಎಂದು ಮಾಜಿ ಸಿಎಂ ಯಡಿಯೂರಪ್ಪ ಕೇಳಿದ್ದಾರೆ. ಆದರೆ ಬಿಜೆಪಿಯ ಬೇರಾವ ನಾಯಕರೂ ಬೆಂಬಲ ಕೇಳಿಲ್ಲ. ಈ ವಿಚಾರ ಇಷ್ಟಕ್ಕೆ ಮಾತ್ರ ಸೀಮಿತವಾಗಿದೆ ಎಂದರು.

ಬಿಜೆಪಿ ಜೊತೆ ಮೈತ್ರಿ ಪ್ರಶ್ನೆಯೇ ಇಲ್ಲ. ನಮ್ಮ ಅಭ್ಯರ್ಥಿಗಳು ನಿಲ್ಲದ ಕಡೆ ಬೆಂಬಲ ನೀಡುವುದು ಬಿಡುವುದು ಸ್ಥಳೀಯ ನಾಯಕರಿಗೆ ಬಿಟ್ಟ ವಿಚಾರ. ಬಿಜೆಪಿ ಜೊತೆ ಯಾವುದೇ ಒಳ ಒಪ್ಪಂದವಾಗಲಿ, ಹೊರ ಒಪ್ಪಂದವಾಗಲಿ ಇಲ್ಲ ಈ ವಿಚಾರದಲ್ಲಿ ಯಾವುದೇ ಗೊಂದಲಗಳು ಬೇಡ. ಜೆಡಿಎಸ್ ಸ್ಪರ್ಧಿಸಿದ 6 ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ ಇರಲಿದೆ. ಆರೂ ಕ್ಷೇತ್ರಗಳಲ್ಲಿ ನಾವು ಏಕಾಂಗಿಯಾಗಿ ಹೋರಾಡುತ್ತೇವೆ ಎಂದು ತಿಳಿಸಿದರು.

ಬಿಜೆಪಿ, ಕಾಂಗ್ರೆಸ್ ಎರಡೂ ರಾಷ್ಟ್ರೀಯ ಪಕ್ಷಗಳ ನಡುವೆ ನಾವು ಹೋರಾಟ ಮಾಡುತ್ತಿದ್ದೇವೆ. 2023ರ ವಿಧಾನಸಭಾ ಚುನಾವಣೆ ನಮ್ಮ ಗುರಿ. 123 ಸೀಟ್ ಜೆಡಿಎಸ್ ಟಾರ್ಗೆಟ್ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...