ಬೆಳಗಾವಿ: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ನಡೆಯುತ್ತಿರುವ ನಡುವೆಯೇ ರಾಜ್ಯದಲ್ಲಿ ಇಂತದ್ದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯಲ್ಲಿ 15 ವರ್ಷದ ಬಾಲಕಿ ಮೇಲೆ ಕಾಮುಕರು ಅಟ್ಟಹಾಸ ಮೆರೆದಿದ್ದಾರೆ.
ಜಮೀನಿಗೆ ತೆರಳಿದ್ದ ಬಾಲಕಿ ಮೇಲೆ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿ, ವಿಷಯ ಯಾರಿಗೂ ಹೇಳದಂತೆ ಬೆದರಿಕೆಯೊಡ್ಡಿದ್ದಾರೆ. 20 ದಿನಗಳ ಹಿಂದೆಯೇ ನಡೆದಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಕೆಲವರಿಗೆ ಹೆಚ್ಚು ಸೊಳ್ಳೆ ಕಚ್ಚಲು ಕಾರಣವೇನು…..? ಇಲ್ಲಿದೆ ಇಂಟ್ರಸ್ಟಿಂಗ್ ಮಾಹಿತಿ
ಮೈಸೂರಿನ ಪ್ರಕರಣದ ಬೆನ್ನಲ್ಲೇ ಬಾಲಕಿ ಪೋಷಕರು ನಿನ್ನೆ ಘಟಪ್ರಭಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಶೇಷ ತಂಡ ರಚಿಸಿ ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ.