ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿರುವಾಗಲೇ ಕೊರೊನಾ ರೂಪಾಂತರಿ ವೈರಸ್ ರಾಜ್ಯಕ್ಕೆ ಶಾಕ್ ನೀಡಿದ್ದು, ಇಂದು ಒಂದೇ ದಿನ ಕರ್ನಾಟಕದಲ್ಲಿ 23 ಜನರಲ್ಲಿ ಒಮಿಕ್ರಾನ್ ದೃಢಪಟ್ಟಿದೆ.
ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದು, ಇಂದು ರಾಜ್ಯದಲ್ಲಿ 23 ಜನರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ. ಅವರಲ್ಲಿ 19 ಜನರು ವಿದೇಶಗಳಿಂದ ಆಗಮಿಸಿದವರಾಗಿದ್ದಾರೆ. ಅಮೆರಿಕಾ, ಯುರೋಪ್, ಆಫ್ರಿಕಾ ದೇಶಗಳಿಂದ ಬಂದ ಹೆಚ್ಚಿನವರಲ್ಲಿ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
ಈ ಮೂಲಕ ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 66ಕ್ಕೆ ಏರಿಕೆಯಾಗಿದೆ.