ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ರಾಜಿನಾಮೆ ಪತ್ರ ಸಲ್ಲಿಸಿದರು.
ಸರ್ಕಾರದ ಸಾಧನಾ ಸಮಾವೇಶದ ವೇಳೆ ಮಾತನಾಡಿದ ಸಿಎಂ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದು, ಬಳಿಕ ಸಂಪುಟ ಸಹೋದ್ಯೋಗಿಗಳ ಜೊತೆ ರಾಜಭವನಕ್ಕೆ ತೆರಳಿದ ಯಡಿಯೂರಪ್ಪ ರಾಜ್ಯಪಾಲ ಗೆಹ್ಲೋಟ್ ಅವರನ್ನು ಭೇಟಿಯಾಗಿ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದರು.