ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಗೆ ಸರ್ಕಾರ ಸ್ಪಂದಿಸಿದೆ. ವೇತನ ಪರಿಷ್ಕರಣೆ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದ ಭರವಸೆಯಂತೆ ಈಗ ಆಯೋಗ ರಚಿಸಲಾಗಿದೆ.
ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮತ್ತು ಇತರೆ ಸೌಲಭ್ಯಗಳ ವಿಸ್ತರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಾವಣಗೆರೆಯಲ್ಲಿ ಇಂದು ಫೋಷಿಸಿದ್ದಾರೆ.