alex Certify BIG BREAKING: ರೂಪಾಂತರಿ ಭೀತಿ ನಡುವೆ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳ; ಒಂದೇ ದಿನ 477 ಜನ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರೂಪಾಂತರಿ ಭೀತಿ ನಡುವೆ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳ; ಒಂದೇ ದಿನ 477 ಜನ ಬಲಿ

ನವದೆಹಲಿ: ದೇಶದಲ್ಲಿ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಭೀತಿ ನಡುವೆಯೇ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಮತ್ತೆ 9,765 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 477 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 469724 ಕ್ಕೆ ಏರಿಕೆಯಾಗಿದೆ.

ಪಟ್ಟು ಸಡಿಲಿಸಿದ ರೈತ ನಾಯಕರು: ಲಿಖಿತ ಭರವಸೆ ನೀಡಿದರೆ ಪ್ರತಿಭಟನೆ ವಾಪಸ್

ಇನ್ನು ದೇಶದಲ್ಲಿ 99763 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 8548 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34037054 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 11,08,467 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 80,35,261 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,24,96,19,515 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...