alex Certify BIG BREAKING: ರೇಪ್ ಸಂತ್ರಸ್ತೆ ಮೇಲೆ ಕಾನ್ಸ್ ಟೇಬಲ್ ಅತ್ಯಾಚಾರ ಪ್ರಕರಣ; ಪೊಲೀಸ್ ಪೇದೆ ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರೇಪ್ ಸಂತ್ರಸ್ತೆ ಮೇಲೆ ಕಾನ್ಸ್ ಟೇಬಲ್ ಅತ್ಯಾಚಾರ ಪ್ರಕರಣ; ಪೊಲೀಸ್ ಪೇದೆ ಬಂಧನ

ಮಂಗಳೂರು: ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಗರ್ಭವತಿಯನ್ನಾಗಿ ಮಾಡಿದ್ದ ಆರೋಪಿ ಪೊಲೀಸ್ ಕಾನ್ಸ್ ಟೇಬಲ್ ಶಿವರಾಜ್ ನನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡ ಎಸ್.ಪಿ. ರಿಷಿಕೇಶ್ ಸೋನಾವಣೆ ತಿಳಿಸಿದ್ದಾರೆ.

ಅತ್ಯಾಚಾರ ಸಂತ್ರಸ್ತೆ ಮೇಲೆ ಅತ್ಯಾಚಾರ ಮಾಡಿರುವುದಾಗಿ ಕಡಬ ಠಾಣೆ ಪೊಲೀಸ್ ಕಾನ್ಸ್ ಟೇಬಲ್ ಶಿವರಾಜ್ ವಿರುದ್ಧ ಆರೋಪ ಕೇಳಿಬಂದಿತ್ತು. ಈ ಕುರಿತು ಸಂತ್ರಸ್ತೆ ತಂದೆ ಕಡಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆರೋಪಿ, ಪೊಲೀಸ್ ಪೇದೆ ಶಿವರಾಜ್ ನನ್ನು ಬಂಧಿಸಿದ್ದಾರೆ ಎಂದು ಎಸ್.ಪಿ ತಿಳಿಸಿದ್ದಾರೆ.

BIG NEWS: ಉಪಚುನಾವಣೆ; ಸಿಂದಗಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

ಇನ್ನು ಸಂತ್ರಸ್ತ ಯುವತಿ ಹಾಗೂ ಆಕೆಯ ತಾಯಿ ಕೂಡ ಪತ್ತೆಯಾಗಿದ್ದಾರೆ ಎಂದು ಎಸ್.ಪಿ ರಿಷಿಕೇಶ್ ಮಾಹಿತಿ ನೀಡಿದ್ದಾರೆ.

ಅತ್ಯಾಚಾರಕ್ಕೊಳಗಾಗಿದ್ದ ತನ್ನ ಮಗಳ ಮೇಲೆ ಪೊಲೀಸ್ ಕಾನ್ಸ್ ಟೇಬಲ್ ಶಿವರಾಜ್ ಅತ್ಯಾಚಾರವೆಸಗಿದ್ದು, ಮಗಳು ಗರ್ಭಿಣಿಯಾಗುತ್ತಿದ್ದಂತೆ ಅಬಾರ್ಷನ್ ಮಾಡಿಸಿಕೊಳ್ಳುವಂತೆ ಬೆದರಿಕೆಯೊಡ್ಡುತ್ತಿದ್ದಾನೆ. ಅಲ್ಲದೇ ನಾಲ್ಕು ದಿನಗಳಿಂದ ಮಗಳು ಹಾಗೂ ಆಕೆ ತಾಯಿ ನಾಪತ್ತೆಯಾಗಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಕಾನ್ಸ್ ಟೇಬಲ್ ಶಿವರಾಜ್ ತಲೆಮರೆಸಿಕೊಂಡಿದ್ದಾನೆ ಎಂದು ಸಂತ್ರಸ್ತೆಯ ತಂದೆ ನಿನ್ನೆ ಕಡಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...