ತುಮಕೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಮಾಜಿ ಸಚಿವ ಸೊಗಡು ಶಿವಣ್ಣ, ಲಕ್ಷ್ಮಿ ಹೆಬ್ಬಾಳ್ಕರ್ ಹೆಸರಲ್ಲಿ ಡಿ.ಕೆ.ಶಿವಕುಮಾರ್ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಸೊಗಡು ಶಿವಣ್ಣ, ಚಿಕ್ಕನಾಯಕನಹಳ್ಳಿಯಲ್ಲಿ ಡಿ.ಕೆ.ಶಿ. ಬೇನಾಮಿ ಆಸ್ತಿಯಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಹೆಸರಲ್ಲಿ ಬೇನಾಮಿ ಆಸ್ತಿ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಆಲಿಬಾಬಾ ಗ್ಯಾಂಗ್ ನ ಡಕಾಯಿತ. ಈ ಡಕಾಯಿತನಿಗೆ 40 ಜನರ ಬೆಂಬಲ ಎಂದು ಗುಡುಗಿದ್ದಾರೆ.
ಕಳ್ಳರ ಮೇಲೆ ನಿಗಾ ಇಡಲು ಸಿಸಿ ಟಿವಿ ಅಳವಡಿಸಿ ಪೇಚಿಗೆ ಸಿಲುಕಿದ ವೈದ್ಯ….!
ಪಾವಗಡದ ಸೋಲಾರ್ ಪಾರ್ಕ್ ನಲ್ಲಿ ಡಿ.ಕೆ.ಶಿ. ಸಾವಿರಾರು ಕೋಟಿ ಅವ್ಯವಹಾರ ನಡೆಸಿದ್ದಾರೆ. ಡಿ.ಕೆ.ಶಿ. ಹಾಗೂ ಗ್ಯಾಂಗ್ ಬೇನಾಮಿ ಹೆಸರಲ್ಲಿ ಜಮೀನು ಖರೀದಿಸಿ ಡಕಾಯಿತಿ ಮಾಡುತ್ತಿದೆ. ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಯಾಗಬೇಕು ಎಂದು ಆಗ್ರಹಿಸಿದರು.