ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಹಗ್ಗಜಗ್ಗಾಟ ಮುಂದುವರೆದಿರುವ ಬೆನ್ನಲ್ಲೇ ವಲಸಿಗ ಸಚಿವರು ರಾಜೀನಾಮೆಗೆ ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಒಂದೊಮ್ಮೆ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದರೆ ತಾವೂ ಕೂಡ ಸಚಿವ ಸ್ಥಾನ ಕಳೆದುಕೊಳ್ಳುವ ಆತಂಕ ಎದುರಾಗಿದ್ದು, ಈ ನಿಟ್ಟಿನಲ್ಲಿ ವಿಧಾನಸೌಧದಲ್ಲಿ ಸಚಿವ ಭೈರತಿ ಬಸವರಾಜ್ ಕೊಠಡಿಯಲ್ಲಿ ಪ್ರತ್ಯೇಕ ಸಭೆ ನಡೆಸಿದ 6 ವಲಸಿಗ ಸಚಿವರು, ರಾಜೀನಾಮೆ ಬಗ್ಗೆ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ಹರಾಜಿಗಿಟ್ಟ ಚಿಪ್ಸ್ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ…..!
ಸಭೆ ಬಳಿಕ ಸಚಿವರಾದ ಕೆ.ಸುಧಾಕರ್, ಬಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್, ಗೋಪಾಲಯ್ಯ, ಭೈರತಿ ಬಸವರಾಜ್, ಶಿವರಾಮ್ ಹೆಬ್ಬಾರ್ ಪ್ರತ್ಯೇಕವಾಗಿ ಏಕಮಾದರಿ ಪತ್ರಗಳನ್ನು ಹಿಡಿದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಯಡಿಯೂರಪ್ಪ ರಾಜೀನಾಮೆ ನೀಡಿದರೆ ವಲಸಿಗ ಸಚಿವರೂ ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ ಎಂದು ಹೆಳಲಾಗುತ್ತಿದ್ದು, ಸಿಎಂ ರಾಜೀನಾಮೆ ಸುದ್ದಿ ವಿಚಾರದ ಬೆನ್ನಲ್ಲೇ ವಲಸಿಗ ಸಚಿವರ ನಡೆ ಇದೀಗ ಕುತೂಹಲ ಮೂಡಿಸಿದೆ.