ಚಿಕ್ಕಮಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣ ಇಂದು ತೆರೆಗೆ ಅಬ್ಬರಿಸಿದ್ದು, ಸಿನಿಮಾ ಪ್ರದರ್ಶನದ ವೇಳೆಯೇ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರಿನ ಮಿಲನ ಥಿಯೇಟರ್ ಬಳಿ ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ಯುವಕರು ಹೊಡೆದಾಡಿಕೊಂಡಿದ್ದಾರೆ. ಯುವಕರ ಗುಂಪು, ಭರತ್ ಎಂಬಾತನನ್ನು ಹಿಡಿದು ಮನಬಂದಂತೆ ಥಳಿಸಿದ್ದಾರೆ. ಗಾಯಗೊಂಡು ನೆಲಕ್ಕೆ ಬಿದ್ದರೂ ಬಿಡದ ಕಿಡಿಗೆಡಿಗಳು ಮನಬಂದಂತೆ ಹೊಡೆದಿದ್ದಾರೆ.
ಯುವಕ ಭರತ್ ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಧ್ಯದ ಮಾಹಿತಿ ಪ್ರಕಾರ ಹೆಚ್ಚಿನ ಚಿಕಿತ್ಸೆಗಾಗಿ ಭರತ್ ನನ್ನು ಹಾಸನಕ್ಕೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.