ಬೆಳಗಾವಿ: ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಬೆಳಗಾವಿ ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಿದ್ದು, ಹೊರಬಂದಿದ್ದಾರೆ.
ವಿನಯ್ ಕುಲಕರ್ಣಿ ಜೈಲಿನಿಂದ ಹೊರ ಬರುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರು, ಬೆಂಬಲಿಗರು ಮಾಜಿ ಸಚಿವರಿಗೆ ಹಾರ ಹಾಕಿ ತಿಲಕವಿಟ್ಟು ಅದ್ದೂರಿಯಾಗಿ ಸ್ವಾಗತಿಸಿದರು.
ಅಂಚೆ ಕಚೇರಿ ಖಾತೆಯಿಂದ ಹಣ ವಿತ್ ಡ್ರಾ ಮಾಡುವುದು ಈಗ ಮತ್ತಷ್ಟು ಸುಲಭ
ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣ ಹಾಗೂ ಸಾಕ್ಷ್ಯನಾಶ ಕೇಸ್ ಗಳಲ್ಲಿ ಸಿಬಿಐ ಬಂಧನಕ್ಕೀಡಾಗಿ ಜೈಲು ಸೇರಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ, ಕಳೆದ 6 ತಿಂಗಳಿಂದ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಸೆರೆವಾಸ ಅನುಭವಿಸಿದ್ದರು.
ಮೊನ್ನೆಯೇ ಜಾಮೀನು ಸಿಕ್ಕರೂ ಜಾಮೀನು ಪ್ರತಿ ಜೈಲಧಿಕಾರಿಗಳ ಕೈ ಸೇರದ ಹಿನ್ನೆಲೆಯಲ್ಲಿ ಮಾಜಿ ಸಚಿವರ ಬಿಡುಗಡೆಗೆ ಎರಡು ದಿನ ವಿಳಂಬವಾಗಿತ್ತು. ಇದೀಗ ಮಾಜಿ ಸಚಿವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದ್ದು, ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂತಸ ಮನೆಮಾಡಿದೆ.