ಬೆಳಗಾವಿ: ವಿಪಕ್ಷಗಳ ಗದ್ದಲದ ನಡುವೆಯೂ ಮತಾಂತರ ನಿಷೇಧ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ.
ಮತಾಂತರ ನಿಷೇಧ ಮಸೂದೆ ಬಗ್ಗೆ ವಿಧಾನಸಭೆಯಲ್ಲಿ ಸುದೀರ್ಘ ಚರ್ಚೆಯ ಬಳಿಕ ವಿಪಕ್ಷ ಕಾಂಗ್ರೆಸ್ ಸದಸ್ಯರ ತೀವ್ರ ವಿರೋಧದ ನಡುವೆಯೂ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ರಕ್ಷಣಾ ವಿಧೇಯಕ-2021ಕ್ಕೆ ಅಂಗೀಕಾರ ದೊರೆತಿದೆ. ವಿಧೇಯಕದ ಬಗ್ಗೆ ಇನ್ನಷ್ಟು ಚರ್ಚೆಗೆ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಗದ್ದಲ ನಡೆಸಿದ್ದಾರೆ.
ಈ ನಡುವೆಯೂ ಧ್ವನಿಮತದ ಮೂಲಕ ವಿಧೇಯಕಕ್ಕೆ ಅನುಮೋದನೆ ದೊರೆತಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸದನದಲ್ಲಿ ತಿಳಿಸಿದ್ದು, ವಿಪಕ್ಷ ಸದಸ್ಯರ ಕೋಲಾಹಲ ಹಿನ್ನೆಲೆಯಲ್ಲಿ 10 ನಿಮಿಷಗಳ ಕಾಲ ಸದನ ಮುಂದೂಡಿ ಆದೇಶ ಹೊರಡಿಸಿದರು.