alex Certify BIG BREAKING: ವಿಪಕ್ಷಗಳ ಗದ್ದಲದ ನಡುವೆಯೇ ಮತಾಂತರ ನಿಷೇಧ ಕಾಯ್ದೆ ಮಂಡನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ವಿಪಕ್ಷಗಳ ಗದ್ದಲದ ನಡುವೆಯೇ ಮತಾಂತರ ನಿಷೇಧ ಕಾಯ್ದೆ ಮಂಡನೆ

ಬೆಳಗಾವಿ: ತೀವ್ರ ವಿರೋಧದ ನಡುವೆಯೂ ಮತಾಂತರ ನಿಷೇಧ ಕಾಯ್ದೆ ಮಸೂದೆಯನ್ನು ರಾಜ್ಯ ಸರ್ಕಾರ ಮಂಡಿಸಿದೆ. ವಿಧೇಯಕಕ್ಕೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ.

ಭೋಜನ ವಿರಾಮದ ಬಳಿಕ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಗೃಹ ಸಚಿವ ಅರಗಜ್ಞಾನೇಂದ್ರ ದಿಢೀರ್ ಆಗಿ ಮತಾಂತರ ನಿಷೇಧ ವಿಧೇಯಕ ಮಂಡಿಸಿದ್ದಾರೆ. ಏಕಾಏಕಿ ಮಸೂದೆ ಮಂಡನೆ ಮಾಡಿದ ಸರ್ಕಾರದ ಕ್ರಮಕ್ಕೆ ವಿಪಕ್ಷಗಳು ಗದ್ದಲ ನಡೆಸಿದ್ದಾರೆ.

ಸಂಸದೆ ಸುಮಲತಾ ಅಂಬರೀಷ್ ರನ್ನು 1 ರೂಪಾಯಿಗೆ ಹರಾಜು ಹಾಕಿದ ಕನ್ನಡ ಚಳುವಳಿ ಪಕ್ಷ

ಈ ರೀತಿ ಕದ್ದು ಮುಚ್ಚಿ ಮಸೂದೆ ಮಂಡನೆ ಮಾಡುತ್ತಿರುವುದರ ಉದ್ದೇಶವೇನು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ. ಡಿ.ಕೆ. ಶಿವಕುಮಾರ್ ಮಾತಿಗೆ ಧ್ವನಿಗೂಡಿಸಿದ ವಿಪಕ್ಷ ಸದಸ್ಯರು ಸರ್ಕಾರದ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕದ್ದು ಮುಚ್ಚಿ ಪದ ವಾಪಸ್ ಪಡೆಯುವಂತೆ ಸೂಚಿಸಿದ್ದಾರೆ. ಅಲ್ಲದೇ ಮತಾಂತರ ನಿಷೇಧ ಮಸೂದೆ ಮಂಡನೆಯಷ್ಟೇ ಮಾಡಲಾಗಿದೆ. ಈ ಬಗ್ಗೆ ಚರ್ಚೆಗೆ ನಾಳೆ ಸದನದಲ್ಲಿ ಅವಕಾಶ ನೀಡುವುದಾಗಿ ತಿಳಿಸಿದರು.

ಸ್ಪೀಕರ್ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಜನವಿರೋಧಿ ಮಸೂದೆಯನ್ನು ಸದನದಲ್ಲಿ ಏಕಾಏಕಿ ಮಂಡಿಸಿದ್ದಲ್ಲದೇ ಚರ್ಚೆಗೆ ಅವಕಾಶ ನೀಡದಿರುವುದು ಸರಿಯಲ್ಲ. ಕಾಯ್ದೆ ಜಾರಿಗೆ ನಮ್ಮ ವಿರೋಧವಿದೆ ಎಂದು ವಿಧಾನಸಭೆಯಲ್ಲಿ ನಿಯಮಗಳ ಪುಸ್ತಕ ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತಾಂತರ ನಿಷೇಧ ಮಸೂದೆಗೆ ಆಡಳಿತ ಹಾಗೂ ವಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...