ಬೆಂಗಳೂರು : ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ರಾಜಕೀಯ ಪಕ್ಷಗಳು ಇಂದು ದೆಹಲಿ ಮತ್ತು ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸುತ್ತಿವೆ.
ಮಹಾಮೈತ್ರಿಕೂಟದ ನಾಯಕರು ತನ್ನ ಎರಡನೇ ಏಕತಾ ಸಭೆಯನ್ನು ಬೆಂಗಳೂರಿನಲ್ಲಿ ನಡೆಸುತ್ತಿದ್ದರೆ, ಬಿಜೆಪಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು (INDA) ಪ್ರತಿಪಕ್ಷಗಳ ವಿರುದ್ಧ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಸಭೆ ನಡೆಸಲಿದೆ.
ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕರು ಬೆಂಗಳೂರಿನಲ್ಲಿ ಮೈತ್ರಿಗೆ ಇಂಡಿಯಾ ಎಂದು ನಾಮಕರಣ ಮಾಡಿದ್ದಾರೆ.
I – Indian
N – National
D – Democractic
I – Inclusive
A – Alliance ಎಂದು ನಾಮಕರಣ ಮಾಡಿದ್ದಾರೆ.
ಬೆಂಗಳೂರಿನಲ್ಲಿ ನಡೆಯುತ್ತಿರುವ ಕೇಂದ್ರದ ವಿರೋಧ ಪಕ್ಷಗಳ ಸಭೆಯಲ್ಲಿ ಇಂದು ವಿವಿಧ ಪಕ್ಷದ ನಾಯಕರೊಂದಿಗೆ 2024ರ ಲೋಕಸಭಾ ಚುನಾವಣೆಯಲ್ಲಿ ಸಾಮೂಹಿಕ ಹೋರಾಟ ನಡೆಸಲು ಕೈಗೊಳ್ಳಬೇಕಾದ ಪ್ರಮುಖ ಕ್ರಮಗಳು ಹಾಗೂ ಕಾರ್ಯತಂತ್ರಗಳ ಕುರಿತು ಮಹತ್ವದ ಚರ್ಚೆ ನಡೆಸಲಾಯಿತು.