ಆಘಾತಕಾರಿ ಘಟನೆಯೊಂದರಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮೇಲೆ ದುಷ್ಕರ್ಮಿಗಳು ವಿಮಾನದಲ್ಲೇ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಈ ಸಂದರ್ಭದಲ್ಲಿ ಕೊಲೆ ಬೆದರಿಕೆಯನ್ನೂ ಹಾಕಲಾಗಿದೆ.
ಈ ಕುರಿತು ಸಿಪಿಐ (ಎಂ) ಸಂಸದ ಡಾ. ವಿ. ಶಿವದಾಸನ್, ಡಿಜಿಸಿಎ ಮಹಾ ನಿರ್ದೇಶಕರಿಗೆ ಪತ್ರ ಬರೆದಿದ್ದು, ಭದ್ರತಾ ನಿಯಮಗಳ ಉಲ್ಲಂಘನೆ ಕುರಿತು ಗಮನ ಹರಿಸುವಂತೆ ಹಾಗೂ ಹಲ್ಲೆ ನಡೆಸಿದವರ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಜೂನ್ 13 ರಂದು ಕಣ್ಣೂರಿನಿಂದ ತಿರುವನಂತಪುರಂ ಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.