ಮಡಿಕೇರಿ: ವಿರಾಜಪೇಟೆ ಬಿಜೆಪಿ ಶಾಸಕ, ಮಾಜಿ ಸ್ಪೀಕರ್ ಕೆ.ಜಿ. ಬೊಪಯ್ಯ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಬ್ಲಾಕ್ಮೇಲ್ ಮಾಡಿ, ಬರೋಬ್ಬರಿ 1 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ತಾನು ಎಸಿಬಿ ಅಧಿಕಾರಿ ಎಂದು ಹೇಳಿಕೊಂಡು ಶಾಸಕರಿಗೆ ಕರೆ ಮಾಡಿರುವ ಅಪರಿಚಿತ ವ್ಯಕ್ತಿ, ಚೆನ್ನೈ ಎಸಿಬಿ ಕಚೇರಿಯಿಂದ ಕರೆ ಮಾಡುತ್ತಿದ್ದೇನೆ. ತಮ್ಮ ಮೇಲೆ ಎಸಿಬಿ ದಾಳಿ ನಡೆಯಲಿದೆ. ದಾಳಿ ತಡೆಯಬೇಕು ಎಂದರೆ 1 ಕೋಟಿ ರೂಪಾಯಿ ಹಣ ನೀಡುವಂತೆ ಬೆದರಿಕೆಯೊಡ್ಡಿದ್ದಾನೆ ಎಂದು ತಿಳಿದುಬಂದಿದೆ.
ಈ ಕುರಿತು ಶಾಸಕ ಕೆ.ಜಿ. ಬೋಪಯ್ಯ ಮಡಿಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.